Tel: +91 0836 2251055
11 APRIL 2024
ಹುಬ್ಬಳ್ಳಿಯಲ್ಲಿ ಇಂದು ಆರ್ಯವೈಶ್ಯ ಸಮಾಜ ಬಾಂಧವರ ಜೊತೆ ವಿವಿಧ ವಿಚಾರಗಳ ಕುರಿತು ಸಂವಾದ ನಡೆಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.
ದೇಶದಲ್ಲಿ ಕಳೆದ ಹತ್ತು ವರ್ಷದಲ್ಲಿ ಸಾಕಷ್ಟು ಬದಲಾವಣೆ ಕಂಡು ಬಂದಿದ್ದು, ಅತ್ಯಂತ ದುರ್ಬಲ ಆರ್ಥಿಕತೆ ಹೊಂದಿದ್ದ ಭಾರತ ಇಂದು ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕ ವ್ಯವಸ್ಥೆ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮಿದೆ. ಸರಕಾರದ ಪ್ರತಿಯೊಂದು ಯೋಜನೆಗಳು ರಾಷ್ಟ್ರದ ಕಟ್ಟ ಕಡೆಯ ಪ್ರಜೆಗೂ ತಲುಪಿದಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಿಸಲು ಸಾಧ್ಯ ಎಂಬ ಪರಿಕಲ್ಪನೆಯೊಂದಿಗೆ ರಾಷ್ಟ್ರವನ್ನು ಮುನ್ನಡೆಸುತ್ತಿರುವ ಪ್ರಧಾನಮಂತ್ರಿ ಶ್ರೀ Narendra Modi ಅವರ ಕೈಬಲಪಡಿಸುವ ಕಾರ್ಯಕ್ಕೆ ನಾವೆಲ್ಲರೂ ಜೊತೆಗೂಡಿ ಶ್ರಮಿಸೋಣ ಎಂದು ಎಲ್ಲರಿಗೂ ಮನವರಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ಶ್ರೀ ಬಾಬುರಾವ್ ಘಂಟಸಾಲಿ, ಪ್ರಮುಖರಾದ ಶ್ರೀ ವಿನಾಯಕ ಆಕಳವಾಡಿ, ಶ್ರೀ ಮೋಹನ ಸವಣೂರ, ಶ್ರೀ ಬಸವರಾಜ್ ಹೇಮಾದ್ರಿ, ಶ್ರೀ ರಾಜಶೇಖರ ಕಂಪ್ಲಿ, ಶ್ರೀ ಸುಭಾಷ್ ಬಾಗಲಕೋಟೆ, ಡಾ. ಎಮ್ ಜಿ ಜೀವಣ್ಣವರ ಹಾಗು ಸಮಾಜದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.