3 APRIL 2024

ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಕಲಘಟಗಿ ಕ್ಷೇತ್ರದ ಮರಾಠ ಸಮುದಾಯದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಎಂದಿನಂತೆಯೇ ಈ ಬಾರಿಯೂ ಕೂಡ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಲು ಕೋರಲಾಯಿತು.

ಛತ್ರಪತಿ ಶಿವಾಜಿ ಮಹಾರಾಜರ ಆಡಳಿತ ವೈಖರಿಯನ್ನೇ ತನ್ನ ಸಿದ್ಧಾಂತವನ್ನಾಗಿ ರೂಢಿಸಿಕೊಂಡಿರುವ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ Narendra Modi ಅವರು, ತಮ್ಮ ಸರ್ವಸ್ವವನ್ನು ತ್ಯಜಿಸಿ ದೇಶದ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ. ವಿಕಸಿತ ಭಾರತದ ಮೂಲಕ ನವ ಭಾರತವನ್ನು ನಿರ್ಮಿಸಲು ಮುಂದಾಗಿರುವ ಮೋದಿಯವರು ತಮ್ಮ ಮೂರನೇ ಅವಧಿಯಲ್ಲಿ ದೇಶದ ಇತಿಹಾಸವನ್ನು ವಿಶ್ವದ ಉದ್ದಗಲಕ್ಕೂ ಸಾರಲಿದ್ದಾರೆ. ಭಾರತ ಮುಂದಿನ ಅವಧಿಯಲ್ಲಿ ವಿಶ್ವದ ಹಿರಿಯಣ್ಣನಾಗಿ ಹೊರಹೊಮ್ಮಲಿದೆ. ಹೀಗಾಗಿ ಕಲಘಟಗಿ ಕ್ಷೇತ್ರದ ಮರಾಠ ಸಮುದಾಯ ನಮ್ಮ ಪಕ್ಷಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಶಿವಾಜಿ ಮಹಾರಾಜರ ಸ್ಮೃತಿ ದಿನವಾದ ಇಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದೆನು.

ಈ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ Nagaraj Chebbi , ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಮರಾಠ ಸಮುದಾಯದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: