28 March 2024

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಕಲಘಟಗಿ ದೇವಿಕೊಪ್ಪ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಭಾರತೀಯ ಜನತಾ ಪಕ್ಷದ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ನೆರೆದಿದ್ದ ಸಾವಿರಾರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು.

ಭಾರತವನ್ನು ಇನ್ನೂರು ವರ್ಷಗಳ ಕಾಲ ಆಳ್ವಿಕೆ ನಡೆಸಿದ ಬ್ರಿಟನ್ ದೇಶವನ್ನೇ ಇಂದು ಆರ್ಥಿಕತೆಯಲ್ಲಿ ಹಿಂದಿಕ್ಕಿ ಈಗ 5 ನೇ ಅತಿದೊಡ್ಡ ರಾಷ್ಟ್ರವಾಗಿ ಮುನ್ನುಗ್ಗುತ್ತಿದೆ. ಇದಕ್ಕೆಲ್ಲಾ ಕಾರಣೀಕರ್ತರಾದ ಪ್ರಧಾನಮಂತ್ರಿ ಶ್ರೀ Narendra Modi ಅವರ ಆಡಳಿತವನ್ನು ಮೂರನೇ ಬಾರಿಗೆ ಆರಿಸಿ ತರುವಲ್ಲಿ ನಾವೆಲ್ಲರೂ ಸಿದ್ದರಾಗಿದ್ದೇವೆ ಎಂಬ ಸಂಕಲ್ಪದೊಂದಿಗೆ ಭಾರತ ಮತ್ತು ಭಾರತೀಯರ ಏಳಿಗೆಗಾಗಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸುವ ಭರವಸೆ ನೀಡಿರುವ ಜನತೆ ಬಿಜೆಪಿಗೆ ಜೈಕಾರ ಹಾಕಿ ಬೆಂಬಲಿಸಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ S V Sankanur , ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ Nagaraj Chebbi , ಶ್ರೀ ಈರಣ್ಣ ಜಡಿ, ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

#DharwadMPConstituency

#DharwadPride

#PhirEkBaarModiSarkar

#AbkiBaar400Paar

Tags: