12 March 2024

“ವಂದೇ ಭಾರತ ಮಾತರಂ”

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯವನ್ನು ಉದ್ಘಾಟನೆ ಮಾಡಿ, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರ ಆದಿಯಾಗಿ ನಾಡಿನ ನೂರಕ್ಕೂ ಅಧಿಕ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.

ಭಾರತವನ್ನು ವಿಶ್ವ ಮಟ್ಟದಲ್ಲಿ ಉತ್ತುಂಗಕ್ಕೆ ಕೊಂಡೊಯ್ದ ಮಾನ್ಯ ಪ್ರಧಾನಮಂತ್ರಿ ಶ್ರೀ Narendra Modi ಅವರ ಕಾರ್ಯ ವೈಖರಿಗೆ ಪೂಜ್ಯ ಸ್ವಾಮೀಜಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಧರ್ಮ ರಕ್ಷಣೆ ಮತ್ತು ರಾಷ್ಟ್ರ ರಕ್ಷಣೆಗೆ ಮೋದಿಯವರ ನಾಯಕತ್ವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ Nagaraj Chebbi , ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತ್ತಗಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Tags: