28 March 2024

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಶ್ರೀ Narendra Modi ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಕಲ್ಪದೊಂದಿಗೆ ಇಂದು ಬಿಜೆಪಿಯ ಮೈತ್ರಿಯ ಭಾಗವಾಗಿರುವ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದೆನು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಅಭೂತಪೂರ್ವ ಅಭಿವೃದ್ಧಿ ಕಂಡಿದ್ದು ವಿಶ್ವ ಮಟ್ಟದಲ್ಲಿ ಭಾರತದ ಗೌರವ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜಿಲ್ಲೆಯ ಪ್ರಗತಿಗೆ ನಾವೂ ಕೈ ಜೋಡಿಸಿ, ಬಿಜೆಪಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜಿಲ್ಲಾ ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಭರವಸೆ ನೀಡಿದರು.

ಸಭೆಯಲ್ಲಿ ಶಾಸಕರಾದ ಶ್ರೀ ಎಂ.ಆರ್.ಪಾಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಗಂಗಾಧರ ಮಠ ಸ್ವಾಮಿಗಳು, ಶ್ರೀ ಗುರುರಾಜ ಹುಣಸಿಮರದ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತ್ತಗಟ್ಟಿ, ಮಾಜಿ ಶಾಸಕರಾದ ಶ್ರೀ ವೀರಭದ್ರಪ್ಪ ಹಾಲಹರವಿ, ಪ್ರಮುಖರಾದ ಶ್ರೀ ಷಣ್ಮುಖ ಗುರಿಕಾರ, ಶ್ರೀ ಕೆ.ಎಂ.ಗಡ್ಡಿ ಹಾಗೂ ಎರಡೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: