Tel: +91 0836 2251055
6 APRIL 2024
“ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ”
ಪ್ರಧಾನಮಂತ್ರಿ ಶ್ರೀ Narendra Modi ಅವರ ಕೈಬಲಪಡಿಸುವ ಸಲುವಾಗಿ ಜಾತ್ಯಾತೀತ ಜನತಾದಳ ಪಕ್ಷವು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದು, ಇಂದು, ಜೆಡಿಎಸ್ ಪ್ರಮುಖರೊಂದಿಗೆ ಸಭೆ ನಡೆಸಲಾಯಿತು.
ಮಾಜಿ ಪ್ರಧಾನಮಂತ್ರಿ ಶ್ರೀ H D Devegowda ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೆಲ್ಲರೂ ಬಿಜೆಪಿಯನ್ನು ಬೆಂಬಲಿಸಿ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಭರವಸೆ ನೀಡಿದರು.
ನಾಡಿನ ರಕ್ಷಣೆ ಮತ್ತು ರಾಷ್ಟ್ರದ ರಕ್ಷಣೆಗೆ ನಾವೆಲ್ಲರೂ ಜೊತೆಗೂಡಿ ಮುಂದುವರಿಯಲಿದ್ದೇವೆ ಎಂಬ ವಿಶ್ವಾಸದೊಂದಿಗೆ, ನೆರೆದಿದ್ದ ಎಲ್ಲಾ ಕಾರ್ಯಕರ್ತರಿಗೆ ವಿಕಸಿತ ಭಾರತದ ಪರಿಕಲ್ಪನೆಯ ಬಗ್ಗೆ ವಿವರಿಸಿದೆನು.
ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಗುರುರಾಜ ಹುಣಸಿಮರದ, ಮಾಜಿ ಸಚಿವರಾದ ಶ್ರೀ ಕೆ.ಎನ್.ರೆಡ್ಡಿ, ಜೆಡಿಎಸ್ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಬಿ ಬಿ ಗಂಗಾಧರಮಠ, ಶ್ರೀ ವೀರಭದ್ರಪ್ಪ ಹಾಲಹರವಿ, ಶ್ರೀ ಅಹ್ಮದ್ ಸಿ ಅರಸಿಕೇರಿ, ಬಿಜೆಪಿ ಪ್ರಮುಖರಾದ ಶ್ರೀ ಪ್ರಭು ನವಲಗುಂದಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.