Tel: +91 0836 2251055
ಇಂದು ಧಾರವಾಡ ವಿಧಾನಸಭಾ ಕ್ಷೇತ್ರದ ಮರೇವಾಡ, ತಿಮ್ಮಾಪುರ ಮತ್ತು ಕರಡಿಗುಡ್ಡ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ಅವರ ನಾಯಕತ್ವದಲ್ಲಿ ಭಾರತವು ಆರ್ಥಿಕ ಬೆಳವಣಿಗೆಯನ್ನು ಕಾಣುವುದರ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿ, ರಾಷ್ಟ್ರೀಯ ಭದ್ರತೆ ಸುಧಾರಿಸಿದೆ ಹಾಗು ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನವೂ ಬಲಗೊಂಡಿದೆ. ಭಾರತದ ಈ ಸರ್ವತೋಮುಖ ಏಳಿಗೆ ಹೀಗೆ ಮುಂದುವರೆಯಲು ನಾವು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ, ಶ್ರೀ ನರೇಂದ್ರ ಮೋದಿಯವರನ್ನು ಮೂರನೇ ಅವಧಿ ಪ್ರಧಾನಿಯನ್ನಾಗಿಸಬೇಕಿದೆ. ಇದೇ ಸಂದರ್ಭದಲ್ಲಿ ಮರೇವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ Amrut Desai , ಶ್ರೀಮತಿ Seema Ashok Masuti , ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಗುರುರಾಜ ಹುಣಸಿಮರದ, ಶ್ರೀ ಗಂಗಾಧರ ಪಾಟೀಲ್ ಕುಲಕರ್ಣಿ, ಶ್ರೀ ಶಶಿಮೌಳಿ ಕುಲಕರ್ಣಿ, ಪಾಲಿಕೆಯ ಸದಸ್ಯರಾದ ಶ್ರೀಮತಿ ಸವಿತಾ ಅಮರಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.