Tel: +91 0836 2251055
22 March 2024
“ವಿಕಸಿತ ಭಾರತ ನಿರ್ಮಾಣ ನಮ್ಮ ಗುರಿ”
ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸುವ ಗುರಿ ಹೊಂದಿದ್ದು, ಇಂದು ಚುನಾವಣಾ ಪೂರ್ವಭಾವಿಯಾಗಿ ಧಾರವಾಡ-74 ವಿಧಾನಸಭಾ ಕ್ಷೇತ್ರದ ಪಕ್ಷದ ಪ್ರಮುಖರ ಸಭೆ ನಡೆಸಿ ಚರ್ಚಿಸಲಾಯಿತು.
ಧಾರವಾಡ -74 ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್ ಪ್ರಮುಖರೊಂದಿಗೆ ಇಂದು ನಡೆದ ಸಭೆಯಲ್ಲಿ, ಪ್ರತೀ ವಾರ್ಡ್‌ಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು, ಈ ಬಾರಿಯ ಚುನಾವಣೆಯಲ್ಲಿ “ಭಾರತವನ್ನು ಗೆಲ್ಲಿಸುವ” ಸಂಕಲ್ಪ ಮಾಡಿ ಚುನಾವಣಾ ತಯಾರಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಮತ್ತೆ ಗೆಲ್ಲಿಸುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಶಾಸಕರಾದ ಶ್ರೀ Arvind Bellad , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಮಂಡಲ ಅಧ್ಯಕ್ಷರಾದ ಶ್ರೀ ಬಸವರಾಜ ಗರಗ, ಪಾಲಿಕೆಯ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.