12 March 2024

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯವನ್ನು ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು. ಭಾರತದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧ. ಅಭಿವೃದ್ಧಿಯ ಮೂರನೇ ಪರ್ವಕ್ಕೆ ನಾಂದಿ ಹಾಡಲು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಯಾಗಿ ನವ ಭಾರತದ ಹೊಸ ಅಧ್ಯಾಯವನ್ನು ಪ್ರಾರಂಭಿಸಬೇಕಿದೆ. ಹಾಗಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಶುಭಕೋರಿ ಸಿದ್ಧತೆ ನಡೆಸುವಂತೆ ಕೋರಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀ Shankar Patil Munenakoppa , ಜೆಡಿಎಸ್ ಪಕ್ಷದ ಪ್ರಮುಖರು ಮಾಜಿ ಸಚಿವರಾದ ಶ್ರೀ ಕೆ.ಎನ್‌.ಗಡ್ಡಿ, ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತ್ತಗಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Tags: