Tel: +91 0836 2251055
1 April 2024
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಯಲಿವಾಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ಯಲಿವಾಳ ಮಾರುಕಟ್ಟೆ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದೆನು.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ಸಂಕಲ್ಪದೊಂದಿಗೆ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಸರ್ವ ವರ್ಗ ಸಮಾನತೆಯನ್ನು ಸಾಧಿಸಲು ಕಳೆದ ಹತ್ತು ವರ್ಷಗಳಿಂದ ದುಡಿದಿದೆ. ಕೋಟ್ಯಾಂತರ ಭಾರತೀಯರು ಮೋದಿ ಸರ್ಕಾರ ಜಾರಿಗೊಳಿಸಿದ ಯೋಜನೆಗಳ ಲಾಭ ಪಡೆದು ಅವರ ಜೀವನ ಸುಗಮವಾಗಿದೆ. ಭಾರತ ವಿಶ್ವಗುರು ಆಗುವುದರೊಂದಿಗೆ ಪ್ರತಿಯೊಬ್ಬ ಭಾರತೀಯನನ್ನು ಅಭಿವೃದ್ಧಿಯ ಪಥದಲ್ಲಿ ಸಾಗಿಸಲು ಶ್ರೀ ನರೇಂದ್ರ ಮೋದಿಯವರು ಮೂರನೇ ಬಾರಿಯೂ ಪ್ರಧಾನಿಯಾಗಬೇಕು. ಈ ಸಂಕಲ್ಪದೊಂದಿಗೆ ನಮ್ಮ ಯಲಿವಾಳದ ಕಾರ್ಯಕರ್ತರು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸುವುದಾಗಿ ಹೇಳಿ ಜಯಕಾರ ಹಾಕಿದರು.
ಇಂದಿನ ಸಭೆಯಲ್ಲಿ ಶಾಸಕರಾದ ಶ್ರೀ M R Patil , ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಭಾರತೀಯ ಜನತಾ ಪಕ್ಷದ ಮಂಡಲ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು ಉಪಸ್ಥಿತರಿದ್ದರು.