Tel: +91 0836 2251055
22 March 2024
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ಶಿಗ್ಗಾಂವ – ಸವಣೂರು ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಪ್ರಮುಖರೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ Basavaraj Bommai ಅವರೊಂದಿಗೆ ಸಭೆ ನಡೆಸಿ, ಚುನಾವಣಾ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದು, ಜಿಲ್ಲೆಯಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ದೇಶದಲ್ಲಾದ ಬದಲಾವಣೆಯ ಸಕಾರಾತ್ಮಕ ಪರಿಣಾಮವನ್ನು ಪ್ರತೀ ಮನೆ ಮನೆಗೆ ತಲುಪಿಸುವ ಕೆಲಸ ಮಾಡಲು ಸಿದ್ಧ ಎಂದು ಸಭೆಯಲ್ಲಿ ಭರವಸೆ ನೀಡಿದರು. ಜನತೆಯ ಹಿತ ರಕ್ಷಣೆಯೊಂದಿಗೆ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿರುವುದರಿಂದ, ಜನತೆಯ ಆಶೀರ್ವಾದ ಇದ್ದೇ ಇರುತ್ತದೆ ಎಂಬ ವಿಶ್ವಾಸವಿದೆ.
ಸಭೆಯಲ್ಲಿ ಶಿಗ್ಗಾಂವ – ಸವಣೂರು ಕ್ಷೇತ್ರದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.