Tel: +91 0836 2251055
20 APRIL 2024
ಇಂದು ಧಾರವಾಡ ಲೋಕಸಭಾ ಕ್ಷೇತ್ರದ ಸತ್ತೂರಿನ ಎಸ್.ಡಿ.ಎಂ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಜೆ.ಎಸ್.ಎಸ್. ಕಾಲೇಜು ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯಲ್ಲಾದ ಅಭಿವೃದ್ಧಿ ಕಾರ್ಯಗಳು ಮತ್ತು ದೇಶದಲ್ಲಿ ಪ್ರಧಾನ ಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಆಗುತ್ತಿರುವ ಬದಲಾವಣೆಗಳ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.
ಇಂದಿನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ Arvind Bellad , ಹು-ಧಾ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ರಾಜಣ್ಣ ಕೊರವಿ, ಡಾ. ನಿರಂಜನ ಕುಮಾರ್, ಡಾ. ಅಜಿತ್ ಪ್ರಸಾದ್ ಹಾಗೂ ಎಸ್.ಡಿ.ಎಂ ಮತ್ತು ಜೆ ಎಸ್ ಎಸ್ ಸಂಸ್ಥೆಗಳ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ಪ್ರಮುಖರು ಉಪಸ್ಥಿತರಿದ್ದರು.