Tel: +91 0836 2251055
17 March 2024
ಹುಬ್ಬಳ್ಳಿಯ ಅಕ್ಷಯಪಾರ್ಕ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಕಳೆದ ಕೆಲ ದಿನಗಳಿಂದ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಸಂಜೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದೆನು.
ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಲೋನಿಯ ನಿವಾಸಿಗಳಲ್ಲಿ ಬೆಂಬಲ ಕೋರಿದೆನು. ಸಭೆಯಲ್ಲಿ ಸೇರಿದ್ದ ನೂರಾರು ನಿವಾಸಿಗಳು ದೇಶದ ಹಿತಕ್ಕಾಗಿ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಬಿಜೆಪಿ ಸರಕಾರ ಮತ್ತು ಜಿಲ್ಲೆಯ ಸಮಗ್ರ ಪ್ರಗತಿಗೆ ಬಿಜೆಪಿಯನ್ನೇ ಮತ್ತೊಮ್ಮೆ ಗೆಲ್ಲಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ Mahesh Tenginkai , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಹಾಗೂ ಕಾಲೋನಿಯ ಪ್ರಮುಖರು ಉಪಸ್ಥಿತರಿದ್ದರು.