24 March 2024

ಇಂದು ಹುಬ್ಬಳ್ಳಿಯ ಗಬ್ಬೂರಿನಲ್ಲಿ ಹೋಳಿ ಹುಣ್ಣಿಮೆ ಪ್ರಯುಕ್ತ ನಡೆದ ಸಭೆಯಲ್ಲಿ ಭಾಗವಹಿಸಿದೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷವನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲು ಕಾರ್ಯಕರ್ತರ ಉತ್ಸಾಹ ಕಂಡು ಬಹಳ ಹರ್ಷವಾಯಿತು.

ಕಳೆದ ಹತ್ತು ವರ್ಷಗಳಲ್ಲಿ ಮೋದಿಯವರ ಅಧಿಕಾರ ಅವಧಿಯಲ್ಲಿ ದೇಶದಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ನಮ್ಮ ಜಿಲ್ಲೆಯಲ್ಲೂ ಅಭಿವೃದ್ಧಿ ಕೆಲಸಗಳ ಮೂಲಕ ಜನರ ಬೇಡಿಕೆಗಳನ್ನು ಪೂರೈಸಲಾಗಿದೆ. ಹೀಗಾಗಿ ಜನರು ನಮ್ಮ ನೆಚ್ಚಿನ ನಾಯಕನ ಗೆಲುವಿಗೆ ಶ್ರಮಿಸುತ್ತಿದ್ದಾರೆ.

ಸಭೆಯಲ್ಲಿ ಶಾಸಕರಾದ ಶ್ರೀ Mahesh Tenginkai , ಪಕ್ಷದ ಪ್ರಮುಖರಾದ ಶ್ರೀ ಶಿವು ಮೆಣಸಿನಕಾಯಿ, ಶ್ರೀ ಪ್ರಭು ನವಲಗುಂದ, ಮಾಜಿ ಶಾಸಕರಾದ ಶ್ರೀ ಅಶೋಕ ಕಾಟವೆ, ಶ್ರೀ ಡಾ.ಕ್ರಾಂತಿಕಿರಣ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: