Tel: +91 0836 2251055
17 March 2024
ಶಿಗ್ಗಾಂವ – ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿ, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು.
ಕಳೆದ ಅನೇಕ ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಬೆಂಬಲಕ್ಕೆ ನಿಂತು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾ ಬಂದಿರುವ ಶಿಗ್ಗಾಂವ ಸವಣೂರು ಜನತೆ, ಈ ಬಾರಿಯೂ ಕಮಲದ ಚಿಹ್ನೆಗೆ ಮತ ನೀಡುವ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡುತ್ತಾರೆ ಎಂಬ ವಿಶ್ವಾಸವಿದೆ.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ Basavaraj Bommai , ಚುನಾವಣಾ ಉಸ್ತುವಾರಿ ಶ್ರೀ ಎಂ.ನಾಗರಾಜ ಮಂಡಲದ ಪ್ರಮುಖರು ಹಾಗೂ ಊರ ಹಿರಿಯರು ಉಪಸ್ಥಿತರಿದ್ದರು.