Tel: +91 0836 2251055
27 March 2024
“ಕಮಲ ಅರಳಿಸಲು ಸಜ್ಜಾದ ಕಾರ್ಯಕರ್ತರ ಪಡೆ”
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಲಯಕ್ಕೆ ಆಗಮಿಸಿದ ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯರಾದ ಶ್ರೀ BS Yediyurappa ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚುನಾವಣಾ ತಯಾರಿಯ ಕುರಿತು ಚರ್ಚಿಸಲಾಯಿತು.
ದೇಶಾದ್ಯಂತ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಜನಪರ ಆಡಳಿತಕ್ಕೆ ಜನಮನ್ನಣೆ ಈಗಾಗಲೇ ಸಿಕ್ಕಿದ್ದು, ಕರ್ನಾಟಕದಲ್ಲೂ ಈ ಬಾರಿ ಕಮಲ ಪಡೆ ಐತಿಹಾಸಿಕ ಗೆಲುವು ಸಾಧಿಸುವ ವಿಶ್ವಾಸವಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯೇ ನಮಗೆ ಶ್ರೀರಕ್ಷೆಯಾಗಲಿದೆ.
ಸಭೆಯಲ್ಲಿ ಶಾಸಕರಾದ ಶ್ರೀ Mahesh Tenginkai , ಶ್ರೀ ಎಂ ಆರ್ ಪಾಟೀಲ್, ಮಾಜಿ ಸಚಿವರಾದ ಶ್ರೀ Shankar Patil Munenakoppa , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಶ್ರೀ ನಿಂಗಪ್ಪ ಸುತ್ತಗಟ್ಟಿ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್.ರವಿಕುಮಾರ್, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.